ಹಂತ ಹಂತವಾಗಿ ಸಫಾರಿ ಪುನಾರಂಭ: ಈಶ್ವರ ಖಂಡ್ರೆ

ಬೆಂಗಳೂರು  : ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನ.7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮದ ಧಾರಣಾ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ನಿಗದಿ ಪಡಿಸಲು ರಚಿಸಲಾಗಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಾಂತ್ರಿಕ ಸಮಿತಿ ನೀಡಿರುವ ಪ್ರಾಥಮಿಕ ವರದಿಯ ಪರಾಮರ್ಶೆ ನಡೆಸಿದರು.

ಹೆಗ್ಗಡ ದೇವನಕೋಟೆಯಲ್ಲಿ ರೈತರೂ ಸೇರಿದಂತೆ ಸಾವಿರಾರು ಸ್ಥಳೀಯರು, ರೆಸಾರ್ಟ್ ಸಿಬ್ಬಂದಿ ಪ್ರತಿಭಟನೆ ನಡೆಸಿ ಸಫಾರಿ ನಿಲ್ಲಿಸಿರುವುದರಿಂದ ತಮ್ಮ ಜೀವನೋಪಾಯಕ್ಕೆ ಅಡ್ಡಿಯಾಗಿದ್ದು, ಸಫಾರಿ ಪುನಾರಂಭಿಸಬೇಕು ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಮಾಧ್ಯಮಗಳಲ್ಲಿ ಸಫಾರಿ ಪುನಾರಂಭಿಸಬೇಕು ಎಂದು ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಜೀವವೂ ಉಳಿಯಬೇಕು, ಜೀವನೋಪಾಯವೂ ಇರಬೇಕು ಎಂಬ ಕಾರಣಕ್ಕಾಗಿ ಸಫಾರಿಯನ್ನು ನಿಯಂತ್ರಿತವಾಗಿ ಮತ್ತು ಹಂತಹಂತವಾಗಿ ಪುನಾರಂಭ ಮಾಡುವ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ನಂತರ ಅವರು, ಬಂಡೀಪುರದಲ್ಲಿ ನವೆಂಬರ್ ವರೆಗೆ ನಡೆಯುತ್ತಿದ್ದ ಟ್ರಿಪ್, ಸಮಯ ಮತ್ತು ವಾಹನ ಸಂಖ್ಯೆಯಲ್ಲಿ ಕಡಿತ ಮಾಡಿ ಸಫಾರಿ ಪುನಾರಂಭಕ್ಕೆ ಸಮ್ಮತಿಸಲಾಗಿದೆ ಎಂದು ತಿಳಿಸಿದರು.

More articles

Latest article

Most read