ನದಿಗೆ ಹಾರಲು ಬಂದಿದ್ದ ಯುವಕನನ್ನು ರಕ್ಷಿಸಿದ್ದು ಹೇಗೆ ಗೊತ್ತೇ?

ಸಕಲೇಶಪುರ ಮೂಲದ ಯುವಕನೋರ್ವ ಹಳೇ ಹೇಮಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ ಗ್ರಾಮದ ನಿವಾಸಿ ಅನಿಲ್ ಎಂದು ತಿಳಿದು ಬಂದಿದೆ.

ಹಳೇ ಹೇಮಾವತಿ ಕಬ್ಬಿಣದ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ನೋಡಿದ ಅಪ್ಪಯ್ಯ ಹಾಗೂ ನಾಸಿರ್ ಎಂಬುವವರು ಆತನನ್ನು ತಡೆದು, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನನ್ನ ಮನಸ್ಥಿತಿ ಸರಿಯಿಲ್ಲ ಸಾಯಲು ಬಂದಿದ್ದೇನೆ ಎಂದು ಹೇಳುತ್ತಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆತ್ಮಹತ್ಯೆ ಯತ್ನಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಚಾರಣೆ ನಂತರ ಇನ್ನಷ್ಟು ಮಾಹಿತಿ ತಿಳಿದುಬರಲಿದೆ ಸಕಲೇಶಪುರ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

More articles

Latest article

Most read