ಶ್ರೀಗಂಧದ ಮರ: ತೋಟಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡಿಸಲು ಮನವಿ

Most read

ಬೆಂಗಳೂರು: ಕೃಷಿಭೂಮಿಯಲ್ಲಿ ಬೆಳೆಯುವ ಶ್ರೀಗಂಧ ಮರಗಳ ಮೌಲ್ಯ ಧಾರಣೆಯನ್ನು ವೈಜ್ಞಾನಿಕವಾಗಿ ನಿರ್ಧರಿಸಲು ತೋಟಗಾರಿಕೆ ಇಲಾಖೆಗೆ ನೀಡುವಂತೆ ಕೋರಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ ಹಾಗೂ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಶ್ರೀಗಂಧದ ಮರಗಳು ಅಧಿಕ ಸಂಖ್ಯೆಯಲ್ಲಿ ಕಳ್ಳತನವಾಗುತ್ತಿದ್ದು, ವಿದೇಶಗಳಿಗೆ ರಫ್ತು ಮಾಡಲಾಗುತ್ತಿದ. ಇದರ ಹಿಂದಿರುವ ಮಾಫಿಯಾಗಳನ್ನು ಕಂಡು ಹಿಡಿದು ಶಿಕ್ಷಿಸಬೇಕು. ಬೆಳೆಗಾರರು, ಬೆಳೆ ರಕ್ಷಣೆ ಹಾಗೂ ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ಅನುಮತಿ ನೀಡುವಂತೆ ಒತ್ತಾಯಿಸಿದರು. ಅರಣ್ಯದಲ್ಲಿರು ಶ್ರೀಗಂಧದ ಮರಗಳನ್ನು ಮಾತ್ರ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡಿಸಿ, ತೋಟದಲ್ಲಿ ಬೆಳೆಯುವ ಮರಗಳನ್ನು ತೋಟಗಾರಿಕಾ ಇಲಾಖೆಯ ವ್ಯಾಪ್ತಿಗೆ ಒಳಪಡಿಸುವಂತೆ ಒತ್ತಾಯಿಸಿದ ನಿಯೋಗ ತಮ್ಮ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

More articles

Latest article