Saturday, July 27, 2024

ಸಾಂದೀಪಿನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 1 ರವರೆಗೆ ವಿಸ್ತರಣೆ : ಸಚಿವ ಕೃಷ್ಣ ಬೈರೇಗೌಡ

Most read

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್‌ 1 ರವರೆಗೆ ವಿಸ್ತರಿಸಲಾಗಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಿರುವ 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೇರವಾಗಿ ಅವರ ಖಾತೆಗೆ ವಿದ್ಯಾರ್ಥಿವೇತನ ಪಡೆಯಲಿದ್ದಾರೆ ಎಂದು ತಿಳಿಸಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಾವಲಂಬಿ ಸ್ವಯಂ ಉದ್ಯೋಗ ಸಾಲದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಸಹ ಸಮಯವನ್ನು ವಿಸ್ತರಿಸಲಾಗಿದೆ ಇದನ್ನು ಉಪಯೋಗಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಸ್ವಾವಲಂಬಿ ಸ್ವಯಂ ಉದ್ಯೋಗ ಸಾಲದ ಸಹಾಯಧನದ ಯೋಜನೆಯಲ್ಲಿ ಗರಿಷ್ಠ 5 ಲಕ್ಷದ ವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದವರು ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಸಾಂದೀಪನಿ ವಿದ್ಯಾರ್ಥಿ ವೇತನ

ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ “ಸಾಂದೀಪನಿ” ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು.

ಯುಜಿ/ಪಿಜಿ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ.

ಅರ್ಜಿ ಸಲ್ಲಿಸಲು ಅರ್ಹತೆ

ಪಿಯುಸಿ, ಡಿಪ್ಲೊಮ, ಐಟಿಐ, ಪದವಿ, ಸ್ನಾತಕೋತ್ತರ ಪದವಿ, (ತಾಂತ್ರಿಕ ಹಾಗೂ ತಾಂತ್ರಿಕೇತರ), ಇತರೆ ಮೆಟ್ರಿಕ್ ನಂತರದ ಕೋರ್ಸ್‌ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು.

More articles

Latest article