ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ
ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಗಾಗಿ ತೆರೆಮರೆಯ ಕಸರತ್ತುಗಳು ಆರಂಭವಾಗಿವೆ.
ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೇ ಉಪ ಚುನಾವಣೆ ನಡೆಯಲಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ತುಕಾರಾಂ ಆಯ್ಕೆಯಾಗಿದ್ದರು. ಇದೀಗ ಅವರು ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಅವರ ಪತ್ನಿ ಅನುಪಮಾ ಅವರಿಗೆ ಟಿಕೆಟ್ ಖಚಿತವಾಗಿದೆ.
ಆದರೆ ಸ್ಥಳೀಯ ಮುಖಂಡರು ತುಕಾರಾಂ ಅವರ ಕುಟುಂಬ ಹೊರತುಪಡಿಸಿ ಬೇರೆಯವರಿಗೆ ಟಿಕೆಟ್ ನೀಡುವಂತೆ ಆಗ್ರಹಪಡಿಸುತ್ತಿದ್ದಾರೆ.
ಕಳೆದ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸೋಮವಾರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಈ ಕ್ಷೇತ್ರದ 20 ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ನೀಡುವ ಮೂಲಕ ಪ್ರಚಾರವನ್ನು ಆರಂಭಿಸಿದ್ದಾರೆ.
ಸಂಡೂರಿನಿಂದ ತುಕಾರಾಂ ಅವರ ಪತ್ನಿ ಅನುಪಮಾ ಇಲ್ಲವೇ ಪುತ್ರಿ ವಂದನಾ ಸ್ಪರ್ಧೆ ಖಚಿತ ಎನ್ನಲಾಗುತ್ತಿದೆ.
ಬಿಜೆಪಿ ಟಿಕೆಟ್ ಗಾಗಿ ಮಾಜಿ ಸಂಸದ ದೇವೇಂದ್ರಪ್ಪ, ಶ್ರೀರಾಮುಲು ಮತ್ತು ಎಸ್ ಟಿ ಮೋರ್ಚಾ ಅಧ್ಯಕ್ಷ ಕೆ.ದಿವಾಕರ್ ಆಕಾಂಕ್ಷಿಗಳಾಗಿದ್ದಾರೆ.