Wednesday, December 11, 2024

ಸಂಜಯ್ ಮಲ್ಹೋತ್ರಾ ನೂತನ RBI  ಗವರ್ನರ್ ; ನಾಳೆ ಅಧಿಕಾರ ಸ್ವೀಕಾರ

Most read

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್​ಗೆ (RBI) ನೂತನ ಗವರ್ನರ್ ಆಗಿ ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ. ಆರ್​ಬಿಐ ಹಾಲಿ ಗವರ್ನರ್ ಆಗಿರುವ ಶಕ್ತಿಕಾಂತ ದಾಸ್ ಅವರ ಸೇವಾವಧಿ ಡಿಸೆಂಬರ್ 10, ನಾಳೆ ಮಂಗಳವಾರ ಅಂತ್ಯವಾಗುತ್ತಿದೆ. ಡಿಸೆಂಬರ್ 11ರಂದು ಸಂಜಯ್ ಮಲ್ಹೋತ್ರಾ ಆರ್​ಬಿಐ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರ ಸೇವಾವಧಿ ಮೂರು ವರ್ಷ ಇರಲಿದೆ.

ಸಂಜಯ್ ಮಲ್ಹೋತ್ರಾ ರಾಜಸ್ಥಾನ ಕೇಡರ್​ನ 1990ರ ಬ್ಯಾಚ್​ನ ಐಎಎಸ್ ಅಧಿಕಾರಿಯಾಗಿದ್ದಾರೆ. ಐಐಟಿ ಕಾನ್ಪುರ್​ನಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಮಾಡಿದ್ದಾರೆ. ಅಮೆರಿಕದ ಪ್ರಿನ್ಸ್​ಟನ್ ಯೂನಿವರ್ಸಿಟಿಯಲ್ಲಿ ಸಾರ್ವಜನಿಕ ನೀತಿ ವಿಷಯದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ.  ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸದ್ಯ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್​ಇಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಜಿಎಸ್​ಟಿ ಮಂಡಳಿಯಲ್ಲೂ ಅವರರು ಸೇವೆ ಸಲ್ಲಿಸಿದ್ದರು. ವಿದ್ಯುತ್, ಹಣಕಾಸು, ತೆರಿಗೆ, ಐಟಿ, ಗಣಿ ಇತ್ಯಾದಿ ಹಲವು ಕ್ಷೇತ್ರಗಳಲ್ಲಿ ಸಂಜಯ್ ಮಲ್ಹೋತ್ರಾ ಕೆಲಸ ಮಾಡಿದ ಅನುಭವಿ ಎನಿಸಿದ್ದಾರೆ.

ವಿದ್ಯುತ್ ಸಚಿವಾಲಯದಲ್ಲಿ ಅಪರ ಕಾರ್ಯದರ್ಶಿಯಾಗಿದ್ದ ಅವರು 3 ಲಕ್ಷ ಕೋಟಿ ರೂ ಮೊತ್ತದ ವಿದ್ಯುತ್ ವಿತರಣೆಯಲ್ಲಿ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ಪ್ರಮುಖ ಪಾತ್ರ ವಹಿಸಿದ್ದಾರೆ. ತೆರಿಗೆ, ಸಾರ್ವಜನಿಕ ಹಣಕಾಸು ಇಂಧನ ವಲಯದ ಸುಧಾರಣೆ, ಆರ್ಥಿಕ ಆಡಳಿತದ ವಿಚಾರಗಳಲ್ಲಿ ಅವರಿಗಿರುವ ಪರಿಣಿತಿಯು ವರದಾನವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

More articles

Latest article