ಸಂಸ್ಕೃತ ಭಾಷೆ ಗೊತ್ತಿಲ್ಲದಿದ್ದರೆ ಸ್ವರ್ಗಕ್ಕೆ ವಿಸಾ ಸಿಗುವುದಿಲ್ಲ. ಸ್ವರ್ಗಕ್ಕೆ ಹೋಗಬಯಸುವವರು ಸಂಸ್ಕೃತ ಭಾಷೆಯನ್ನು ಕಲಿಯಬೇಕು ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಸದ್ಯ ಸ್ವಾಮೀಜಿಗಳ ಈ ಹೇಳಿಕೆಯು ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಪರ್ಯಾಯ ಪುತ್ತಿಗೆ ಮಠ ಸ್ವಾಮೀಜಿ, ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ-ಶ್ರೀಕೃಷ್ಣ ಲೀಲೋತ್ಸವದಲ್ಲಿ ಮಾತನಾಡಿ, ಸಂಸ್ಕೃತ ಭಾಷೆ ಗೊತ್ತಿಲ್ಲದಿದ್ದರೆ ಸ್ವರ್ಗಕ್ಕೆ ವಿಸಾ ಸಿಗುವುದಿಲ್ಲ. ಸ್ವರ್ಗಕ್ಕೆ ಹೋಗಬಯಸುವವರು ಸಂಸ್ಕೃತ ಭಾಷೆಯನ್ನು ಕಲಿಯಬೇಕು. ಇದು ಪವಿತ್ರ, ಪಾವನ ಮತ್ತು ಶ್ರೇಷ್ಠ ಭಾಷೆ ‘ ಎಂದರು.
ಇದಕ್ಕೆ ಕನ್ನಡಿಗರು, ಸ್ವಾಮೀಜಿಗಳೆ, ಕನ್ನಡ ಇಲ್ಲದ ಸ್ವರ್ಗ ನಮಗೆ ಬೇಕಿಲ್ಲ” ಎಂದು ಕನ್ನಡ ಅಭಿಮಾನಿಗಳು ಹೇಳಿದ್ದಾರೆ.
ಸಂಸ್ಕೃತ ಸರಳ, ಸುಂದರ ಮತ್ತು ಸುಲಭ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತ. ಇದು ಕೇವಲ ಭಾರತೀಯ ಭಾಷೆಗಳ ಮೂಲವಲ್ಲದೇ ಆಂಗ್ಲ ಭಾಷೆಯ ಮೂಲವೂ ಆಗಿದೆ ಎಂದು ಹೇಳಿದ್ದಾರೆ.