ಬೆಂಗಳೂರು : ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ವೇಳೆ ಸಿದ್ದರಾಮಯ್ಯ ಭಾವುಕರಾದರು ಎನ್ನಲಾಗಿದೆ.
ಕಾವೇರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ಅವರ ಆಡಳಿತ ಸಚಿವರು ಹಾಗೂ ಶಾಸಕರು ಕಣ್ಣೀರು ಹಾಕಿಕೊಂಡು ಭಾವುಕರಾಗಿ ಹೊರ ಬರುತ್ತಿದ್ದಾರೆ.
ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೇ ಕಣ್ಣೀರು ಹಾಕಿದರು. ಕಳೆದ ಮೂರು ವರ್ಷಗಳಿಂದ ಸಚಿವ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದು, ಅವರನ್ನು ಭಾವುಕರನ್ನಾಗಿ ಮಾಡಿತು. ʼ
ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಹಲವು ಸಚಿವರು ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ. ನಿನ್ನೆ ವಿಧಾನಸೌಧದಿಂದ ಸಿಎಂ ಹೊರಬರುವ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಕೂಡ ಬಂದು ಸಿಎಂ ಬಳಿ ಮಾತನಾಡಿ ಬೇಸರ ವ್ಯಕ್ತಪಡಿಸಿದ್ದರು.

