ಸರಪಂಚ್ ಹತ್ಯೆ ಪ್ರಕರಣ: ಮಹಾರಾಷ್ಟ್ರ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಮುಂಬೈ: ಸರಪಂಚ್‌ ಸಂತೋಷ್ ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ ಸಲ್ಲಿಸಿದ್ದಾರೆ. ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ಧನಂಜಯ ಅವರ ಆಪ್ತ ವಾಲ್ಮಿಕ್‌ ಕರಾಡ್‌ ಅವರನ್ನು ಪ್ರಮುಖ ಆರೋಪಿ ಎಂದು ಸಿಐಡಿ ಉಲ್ಲೇಖಿಸಿತ್ತು.

ಧನಂಜಯ ಅವರ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು, ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.

ಎನ್‌ಸಿಪಿಯ ಅಜಿತ್‌ ಪವಾರ್‌ ಬಣದ ನಾಯಕರಾಗಿರುವ ಧನಂಜಯ ಅವರು ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಬೀಡ್ ಸರಪಂಚ್‌ ಆಗಿದ್ದ ಸಂತೋಷ್‌ ಅವರನ್ನು ಕಳೆದ ಡಿಸೆಂಬರ್‌ನಲ್ಲಿ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಪವನ ವಿದ್ಯುತ್ ಕಂಪನಿಯಿಂದ ಹಣ ವಸೂಲಿ ಮಾಡುವುದನ್ನು ವಿರೋಧಿಸಿದ್ದಕ್ಕೆ ದೇಶ್‌ಮುಖ್‌ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಅವರ ಕುಟುಂಬದ ಸದಸ್ಯರು ಆರೋಪಿಸಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ, ಭಾನುವಾರ ಬೀಡ್‌ ಜಿಲ್ಲಾ ನ್ಯಾಯಾಲಯಕ್ಕೆ 1,200 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿತ್ತು. ವಾಲ್ಮಿಕ್‌ ಕರಾಡ್‌ ನನ್ನು ಪ್ರಮುಖ ಆರೋಪಿ ಎಂದು ಹೆಸರಿಸಿತ್ತು. ವಸೂಲಿಗೆ ಅಡ್ಡಿ ಮಾಡುವವರನ್ನು ನಿರ್ನಾಮ ಮಾಡುವಂತೆ ಇತರ ಆರೋಪಿಗಳಿಗೆ ಕರಾಡ್‌ ಸೂಚಿಸಿದ್ದರು ಎಂದು ಸಿಐಡಿ ದೋಷಾರೋಪಟ್ಟಿಯಲ್ಲಿ ಹೇಳಿದೆ. ಈ ಬೆಳವಣಿಗೆಗಳ ನಡುವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಧನಂಜಯ ಮುಂಡೆ ಅವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಸೂಚಿಸಿದ್ದರು.

More articles

Latest article

Most read