ವಿಬಿಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌; ನರೇಗಾ ಉಳಿಸಲು ಇಂದು ಲೋಕಭವನ ಚಲೋ; ಸಿಎಂ, ಡಿಸಿಎಂ, ಎಐಸಿಸಿ ನಾಯಕರು ಭಾಗಿ

ಬೆಂಗಳೂರು: “ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮುಂದುವರೆಸುವಂತೆ ಕಾಂಗ್ರೆಸ್‌ ಇಂದು ರಾಜಭವನ ಚಲೋ ಹಮ್ಮಿಕೊಂಡಿದೆ. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದ್ದು, ನಂತರ ಲೋಕಭನವ ಚಲೋ ನಡೆಯಲಿದೆ.

ಈ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್,  ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರುಗಳು, ಶಾಸಕರುಗಳು, ವಿಧಾನ ಪರಿಷತ್ತಿನ ಸದಸ್ಯರು, ಎಐಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುತ್ತದೆ ಮತ್ತು ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು. 20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ ಎಂದರು.
“ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು” ಎಂದರು.
“ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು” ಎಂದರು.

More articles

Latest article

Most read