ಸಿದ್ದು ಬಜೆಟ್‌ ಹೈಲೈಟ್ಸ್‌ : ಪರಿಶಿಷ್ಟ ಪಂಗಡಗಳ ಕಲ್ಯಾಣ

ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಜೇನುಕುರುಬ, ಸೋಲಿಗ, ಸಿದ್ದಿ ಸೇರಿದಂತೆ ಅತಿ ಸೂಕ್ಷ್ಮ ಬುಡಕಟ್ಟು ಪಂಗಡಗಳ (PVTG) ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ಪ್ರತ್ಯೇಕವಾಗಿ ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಿದೆ. ಅಲ್ಲದೆ, ಈ ಸಮುದಾಯದ ದೂರು ಮತ್ತು ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡಗಳ ಆಯೋಗವನ್ನು ಅಸ್ತಿತ್ವಕ್ಕೆ ತರಲಾಗುವುದು. ಬೆಂಗಳೂರಿನ ಸುಮನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ “ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ” ನಿರ್ಮಾಣವಾಗಲಿದ್ದು, ಈ ಮೂಲಕ ಇಲಾಖೆಯ ಎಲ್ಲಾ ಕಚೇರಿಗಳು ಒಂದೇ ಸೂರಿನಡಿ ಬರಲಿವೆ.

ಶಿಕ್ಷಣಕ್ಕೆ ಪೂರಕವಾಗಿ 50 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು ಮತ್ತು ಆದಿವಾಸಿ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗಾಗಿ 119 ಮಹಿಳಾ ಕೇರ್‌ಟೇಕರ್‌ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗಕ್ಕಾಗಿ ಫಾಸ್ಟ್ ಫುಡ್‌ ಟ್ರಕ್ ಅಥವಾ ಮೊಬೈಲ್ ಕಿಚನ್ ಸ್ಥಾಪಿಸಲು 4 ಲಕ್ಷ ರೂ.ಗಳವರೆಗೆ ಸಹಾಯಧನ ನೀಡಲಾಗುವುದು.

ಹಿಂದುಳಿದ ವರ್ಗಗಳ ಕಲ್ಯಾಣ: ಶೈಕ್ಷಣಿಕ ಮತ್ತು ಆರ್ಥಿಕ ಉತ್ತೇಜನ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಬೆಂಗಳೂರು, ಮೈಸೂರು, ಧಾರವಾಡ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 50 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಬಾಡಿಗೆ ಕಟ್ಟಡಗಳಲ್ಲಿರುವ ವಸತಿ ನಿಲಯಗಳಿಗೆ 50 ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಹಾಗೂ ಹಾಲಿ ಇರುವ ಕಟ್ಟಡಗಳ ದುಸ್ತಿಗೆ ಒಟ್ಟು 80 ಕೋಟಿ ರೂ. ಮೀಸಲಿರಿಸಲಾಗಿದೆ.

ವೃತ್ತಿಪರ ಸಮುದಾಯಗಳ ಏಳಿಗೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ:

  • ಮಡಿವಾಳ ಸಮುದಾಯ: ಬೆಂಗಳೂರು ಮತ್ತು ಮೈಸೂರಿನಲ್ಲಿ 75 ಲಕ್ಷ ರೂ. ಘಟಕ ವೆಚ್ಚದ ಆಧುನಿಕ ಲಾಂಡ್ರಿ (Laundry) ಸ್ಥಾಪನೆ ಹಾಗೂ ನಿರುದ್ಯೋಗಿ ಯುವಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ.
  • ಸವಿತಾ ಸಮಾಜ: ಹೊಸದಾಗಿ ಸಲೂನ್ ಪ್ರಾರಂಭಿಸಲು 10 ಲಕ್ಷ ರೂ.ಗಳವರೆಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ.
  • ತಾಂತ್ರಿಕ ತರಬೇತಿ: ಹಿಂದುಳಿದ ವರ್ಗಗಳ 250 ಇಂಜಿನಿಯರಿಂಗ್ ಪದವೀಧರರಿಗೆ NIT/IIT/IIM ಗಳಲ್ಲಿ AI (ಕೃತಕ ಬುದ್ಧಿಮತ್ತೆ) ತರಬೇತಿ ಪಡೆಯಲು ತಲಾ ಎರಡು ಲಕ್ಷ ರೂ. ಸಾಲ ಸೌಲಭ್ಯ.

ಸಾಲ ಮನ್ನಾ ಮತ್ತು ವಿಶೇಷ ಸಮಿತಿ ರಚನೆ

2021ರ ಮಾರ್ಚ್‌ ಅಂತ್ಯದವರೆಗೆ ವಿವಿಧ ಅಭಿವೃದ್ಧಿ ನಿಗಮಗಳಿಂದ ಸಾಲ ಪಡೆದವರಿಗೆ ಬಡ್ಡಿ ಮನ್ನಾ ಮಾಡುವ ‘ಒಂದಾವರ್ತಿ ತೀರುವಳಿ’ (One-time Settlement Scheme) ಯೋಜನೆಯನ್ನು ಘೋಷಿಸಲಾಗಿದೆ. ಇದರೊಂದಿಗೆ, ಹಿಂದುಳಿದ ವರ್ಗಗಳ ಮೀಸಲಾತಿ ಮತ್ತು ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.

ಕುಂಬಾರ, ತಿಗಳ, ಕೊಡವ ಸೇರಿದಂತೆ ವಿವಿಧ ಸಮುದಾಯಗಳಿಗಾಗಿ ಈಗಾಗಲೇ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸಲು ಸರ್ಕಾರ ಮುಂದಾಗಿದೆ.

More articles

Latest article

Most read