Thursday, May 23, 2024

ಗುಜರಾತ್ ಹೈಕೋರ್ಟ್​​ ನ್ಯಾ. ಎನ್.ವಿ. ಅಂಜಾರಿಯಾ’ರನ್ನು ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ನೇಮಕಕ್ಕೆ ಕೊಲಿಜಿಯಂ ಶಿಫಾರಸು

Most read

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್​​ನ ಹಿರಿಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡಲು ಶಿಫಾರಸು ಮಾಡಿದೆ.

ಪ್ರಸ್ತುತ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಕರ್ನಾಟಕದವರೇ ಆದ ಪಿ.ಎಸ್.ದಿನೇಶ್ ಕುಮಾರ್ ಇದೇ ತಿಂಗಳು (ಫೆಬ್ರವರಿ) 24ರಂದು ನಿವೃತ್ತಿ ಆಗಲಿದ್ದಾರೆ. ಅವರಿಂದ ತೆರವಾಗುವ ಹುದ್ದೆಗೆ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ನೇಮಕ ಮಾಡಲು ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡುವಾಗ, ಕೊಲಿಜಿಯಂ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾದ ಆಶಿಶ್ ಜೆ ದೇಸಾಯಿ ಅವರು ಪ್ರಸ್ತುತ ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಎಲ್ಲಾ ರೀತಿಯಲ್ಲೂ ಯೋಗ್ಯರು ಮತ್ತು ಸೂಕ್ತರು ಎಂದು ಕೊಲಿಜಿಯಂ ಪರಿಗಣಿಸಿದೆ.

ನ್ಯಾಯಮೂರ್ತಿ ಅಂಜಾರಿಯಾ 2011ರ ನವೆಂಬರ್ 21ರಂದು ಗುಜರಾತ್ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ಪಡೆಯುವ ಮುನ್ನ ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪೆನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲಿಕೆ ಮಾಡಿದ್ದರು. ಅಲ್ಲದೆ, ಸಿವಿಲ್ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ ಎಂದು ಕೊಲಿಜಿಯಂ ತಿಳಿಸಿದೆ.

More articles

Latest article