ಮುಂದಿನ ಒಂದು ವಾರ ಕಾಲ ಸುಡಲಿದೆ ಸೆಖೆ: ಅಲ್ಲಲ್ಲಿ ಹಗುರ ಮಳೆ

Most read

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಕ್ಷೀಣವಾಗಿದ್ದು, ಇವತ್ತು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ಏಳು ದಿನಗಳ ಕಾಲ ಎಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಬಾಗಲಕೋಟೆ, ಕಲ್ಬುರ್ಗಿ, ಬೀದರ್, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು-ಸಿಡಿಲು ಒಳಗೊಂಡ ಹಗುರವಾದ ಮಳೆ ಬೀಳುವ ಸಾಧ್ಯತೆ ಇದೆ. ಈ ಪೈಕಿ ಚಿಕ್ಕಮಗಳೂರು, ಕೊಡಗು, ಮೈಸೂರುಗಳಲ್ಲಿ ಏಪ್ರಿಲ್ 25ರಂದು ಹಗುರವಾದ ಮಳೆ ಬೀಳುವ ಸಾಧ್ಯತೆ ಇದೆ.

ಮಿಕ್ಕಂತೆ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಮಾತ್ರ ಕೆಲವಡೆ ಹಗುರವಾದ ಮಳೆ ಬೀಳುವ ಸಾಧ್ಯತೆ ಇದೆ.

ಏಪ್ರಿಲ್ 25ರಿಂದ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದ್ದು, ಮುಂಗಾರು ಪೂರ್ವ ಮಳೆ ಕ್ಷೀಣಿಸಲಿದೆ.

ಕರಾವಳಿ ಕರ್ನಾಟಕದಲ್ಲಿ ಏಪ್ರಿಲ್ 22 ರಿಂದ ರಿಂದ ಏಪ್ರಿಲ್ 26ರವರೆಗೆ ಬಿಸಿ ಮತ್ತು ಶುಷ್ಕ ವಾತಾವರಣವು ಹೆಚ್ಚಾಗುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ.

More articles

Latest article