5, 8, 9 ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ರದ್ದುಗೊಳಿಸಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
2023 ಡಿಸೆಂಬರ್‌ನಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ಮಾಡುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ನ ನ್ಯಾ.ರವಿ ಹೊಸಮನಜ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.
ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.
ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಮಾದರಿಯ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ ಕೂಡ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಎಕ್ಸಾಂ ನಡೆಸುವ ಚಿಂತನೆ ಮಾಡಿತ್ತು. ಆದರೆ ಇದಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸದ್ಯಕ್ಕೆ ರಾಜ್ಯದಲ್ಲಿ 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಎಕ್ಸಾಂ ನಡೆಸಲಾಗುತ್ತಿದೆ.