ಹರಿಯಾಣದಲ್ಲಿ ಶಾಲಾ ಬಸ್​ ಪಲ್ಟಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

Most read

ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಸ್ ಒಂದು ಪಲ್ಟಿಯಾಗಿ ಕನಿಷ್ಠ 40 ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪಿಂಜೋರ್ ಪಟ್ಟಣದ ನೌಲತಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಗಾಯಗೊಂಡ ಮಕ್ಕಳ ನಿಖರ ಸಂಖ್ಯೆಯನ್ನು ಇನ್ನೂ ಗುರುತಿಸಲಾಗಿಲ್ಲ. ಬಸ್ ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪಂಚಕುಲದ ಪಿಂಜೋರ್ ಆಸ್ಪತ್ರೆ ಮತ್ತು ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಗಾಯಗೊಂಡ ಹಲವಾರು ಶಾಲಾ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದನ್ನು ಕಾಣಬಹುದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಹಿತಿ ಪ್ರಕಾರ, ಓರ್ವ ಮಹಿಳೆ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಪಿಜಿಐ ಚಂಡೀಗಢಕ್ಕೆ ಕಳುಹಿಸಲಾಗಿದೆ. ಬಸ್ ಚಾಲಕನ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಪೊಲೀಸ್ ವರದಿಯಲ್ಲಿ ತಿಳಿದುಬಂದಿದೆ.

More articles

Latest article