ಬೆಳಗಾವಿ | ಹಲ್ಲಿ ಬಿದ್ದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ!

Most read

ಶಾಲೆಯ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿ ೨೩ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ.

ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾ. ಉಳ್ಳಾಗಡ್ಡಿಯ ಖಾನಾಪುರ ಗ್ರಾಮದಲ್ಲಿ ನಡೆದಿದೆ. ಖಾನಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿನ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ತಲೆನೋವು, ಸುಸ್ತು ಸೇರಿದಂತೆ ಅಲ್ಪಪ್ರಮಾಣದ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಸಂಕೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಶಾಲೆಯ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕ್ಷೀರ ಭಾಗ್ಯ ಹಾಲಿನಲ್ಲಿ ಹಲ್ಲಿ ಬಿದ್ದಿದ್ದ ವಿಚಾರ ಈಗ ಬಹಿರಂಗವಾಗಿದೆ.

More articles

Latest article