ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಬಾಲಕಿಯರ ಮೇಲುಗೈ; ಉಡುಪಿ ಜಿಲ್ಲೆ ಮೊದಲ ಸ್ಥಾನ

Most read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಫಲಿತಾಂಶವನ್ನು ಪ್ರಕಟಿಸಿದರು. ಈ ಬಾರಿ ಒಟ್ಟು ಶೇ 73. 45 ಮಕ್ಕಳು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ಬಾರಿಯೂ ಪ್ರತಿ ವರ್ಷದಂತೆಯೇ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಟಾಪರ್ ಗಳ ಹೆಸರುಗಳನ್ನು ಪ್ರಕಟಿಸಲಾಗಿದೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಸಂಜನಾ ಬಾಯಿ 597 ಅಂಕದೊಂದಿಗೆ ಟಾಪರ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ ಎರಡು ದಿನ ಮೊದಲೇ ಈ ಬಾರಿ ಫಲಿತಾಂಶವನ್ನು ಪ್ರಕಟಿಸಿರುವುದು ವಿಶೇಷವಾಗಿದೆ.

ಯಾದಗಿರಿ ಜಿಲ್ಲೆಗೆ ಫಲಿತಾಂಶದಲ್ಲಿ ಕಡೇ ಸ್ಥಾನ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ದೀಪಶ್ರೀ-599, ಕೆನರಾ ಕಾಲೇಜ್, ಮಂಗಳೂರು; ದ್ವಿತೀಯ ಸ್ಥಾನ ತೇಜಸ್ವಿನಿ ಎಂ.ಎ-598, ಭಾರತ್ ಮಾತಾ ಕಾಲೇಜ್, ಪಿರಿಯಾಪಟ್ಟಣ; ತೃತೀಯ ಸ್ಥಾನ ಹೆಚ್.ಬಿ.ಭಾರ್ಗವಿ-597 ಮಹಿಳಾ ಸಮಾಜ ಪಿಯು ಕಾಲೇಜು.

2024-25ರಲ್ಲಿ ಶೇಕಡ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.. ಕಲಾ ವಿಭಾಗದಲ್ಲಿ 81,553 ವಿದ್ಯಾರ್ಥಿಗಳು , ವಿಜ್ಞಾನ ವಿಭಾಗದಲ್ಲಿ 2,31,461 ಮತ್ತು ವಾಣಿಜ್ಯ ವಿಭಾಗದಲ್ಲಿ 1,55,425 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ,. ಒಟ್ಟಾರೆ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮಧ್ಯಾಹ್ನ ಕೆಎಸ್ಇಎಬಿ ಪಿಯುಸಿ ಫಲಿತಾಂಶಗಳನ್ನು ಪರಿಶೀಲಿಸಲು ನೇರ ಲಿಂಕ್ ಲಭ್ಯವಿದೆ. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು karresults.nic.in ಅಧಿಕೃತ ವೆಬ್‌ ಸೈಟ್‌ ನಲ್ಲಿ ಪರಿಶೀಲಿಸಬಹುದು. 12 ನೇ ತರಗತಿ ಫಲಿತಾಂಶಗಳನ್ನು ಪರಿಶೀಲಿಸುವ ಲಿಂಕ್ ಥರ್ಡ್ ಪಾರ್ಟಿ ಫಲಿತಾಂಶ ವೆಬ್‌ಸೈಟ್‌ಗಳಲ್ಲಿಯೂ ಲಭ್ಯವಿದೆ.

ಪಿಯುಸಿ ಫಲಿತಾಂಶಗಳನ್ನು ಹೀಗೆ ನೋಡಬಹುದು:

  1. karresults.nic.in ಕರ್ನಾಟಕ ಫಲಿತಾಂಶದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
  3. ಹೊಸ ಪುಟ ತೆರೆಯುತ್ತದೆ, ಅಲ್ಲಿ ಅಭ್ಯರ್ಥಿಗಳು ಲಾಗಿನ್ ವಿವರಗಳನ್ನು ನಮೂದಿಸಬೇಕಾಗುತ್ತದೆ
  4. ಸಬ್‌ ಮಿಟ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಫಲಿತಾಂಶವನ್ನು ಪ್ರದರ್ಶಿಸಲಾಗುತ್ತದೆ
  5. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ಲೋಡ್ ಮಾಡಿ
  6. ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ
    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಎಸ್ಇಎಬಿಯ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಬಹುದು.

More articles

Latest article