ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಏಪ್ರಿಲ್ 9 ರಂದು 2 ನೇ ಪಿಯುಸಿ ಪ್ರಕಟಿಸಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.
ನಾಳೆ ಬೆಳಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಅಂದೇ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೂ ಪಿಯುಸಿ ಪರೀಕ್ಷೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 2025 ರಲ್ಲಿ ಉತ್ತೀರ್ಣ ಪ್ರಮಾಣ 73.45 ರಷ್ಟಿತ್ತು.
ಆನ್ಲೈನ್ನಲ್ಲಿ ಫಲಿತಾಂಶ ನೋಡುವುದು ಹೇಗೆ?
ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ
‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆ ಓಪನ್ ಆಗಲಿದೆ

