ಬೆಂಗಳೂರು: ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ. ಟ್ಯಾಂಕ್ ಬಂಡ್ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪಘಾತದಲ್ಲಿ ಜಿಮ್ ತರಬೇತುದಾರ 30 ವರ್ಷದ ಅರುಣ್ ಸಾವನ್ನಪ್ಪಿದ್ದಾರೆ.
ಯಶವಂತಪುರ ಬಿ.ಕೆ.ನಗರದ ಲಚ್ಚಪ್ಪ ಕಾಲೊನಿಯ ನಿವಾಸಿ ಅರುಣ್ ಅವರು ತಮ್ಮ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಕಲೆಸ ಮುಗಿಸಿಕೊಂಡು ಹಿಂತಿರುಗುತ್ತಿದ್ದರು. ಆದರೆ ಅವರು ಹೆಲ್ಮೆಟ್ ಧರಿಸಿರಲಿಲ್ಲ. ಜೆ.ಪಿ ಪಾರ್ಕ್ ಕಡೆಯಿಂದ ಚೌಡೇಶ್ವರಿ ಬಸ್ ನಿಲ್ದಾಣದ ಕಡೆಗೆ ವೇಗವಾಗಿ ತೆರಳುವಾಗ ಬೈಕ್ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದೆ. ಕೆಳಗೆ ಬಿದ್ದ ರಭಸಕ್ಕೆ ಬೈಕ್ ಅರುಣ್ ಅವರನ್ನು ಸ್ವಲ್ಪ ದೂರ ಎಳೆದೊಯ್ದಿದೆ. ಅರುಣ್ ಅವರ ಸೊಂಟ, ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ಆಟೊದಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಸ್ವಯಂ ಅಪಘಾತದಿಂದ ಬೈಕ್ ಸಂಪೂರ್ಣ ಜಖಂಗೊಂಡಿದೆ. ಮೃತ ಅರುಣ್ ಅವರ ತಂದೆ ಎಂ.ಮುರುಗನಂದಂ ಅವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.