ನವದೆಹಲಿ: ಹಿರಿಯ ಬಿಜೆಪಿ ಮುಖಂಡ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ತೀವ್ರ ನಿಗಾ ಘಟಕದಲ್ಲಿ 97 ವರ್ಷದ ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯ ವೈದ್ಯ ಡಾ. ವಿನೀತ್ ಸೂರಿ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಜೂನ್ ತಿಂಗಳಿಂದ ನಾಲ್ಕು ಬಾರಿ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವಂಬರ್ ನಲ್ಲಿ ಅಡ್ವಾಣಿ ಅವರು ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು.