ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು : ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸಬೇಕು. ಇವರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು. ಹಳೇ ರೌಡಿಗಳು ಹಾಗೂ ಹೊಸದಾಗಿ ಹುಟ್ಟುಕೊಳ್ಳುವ ರೌಡಿಗಳ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿರುವೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

“ಸಕಾಲ ವಿಚಾರದಲ್ಲಿ ಜನರಿಗೆ ಹೆಚ್ಚಿನ ಅನುಕೂಲವಾಗಬೇಕು. ಕರ್ನಾಟಕ ಭವನ ಕಾರ್ಯಾಚರಣೆಯಲ್ಲಿ ನನಗೆ ತೃಪ್ತಿಯಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗಿ, ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಸಭೆ ಮಾಡಿ ಕೆಲವು ವಿಭಾಗಗಳನ್ನು ರಚಿಸಲಾಗುವುದು. ದೆಹಲಿಯಲ್ಲಿರುವ ನಮ್ಮ ರಾಜ್ಯದ ಅಧಿಕಾರಿಗಳು, ರಾಜ್ಯದ ಯೋಜನೆಗಳ ಅನುಷ್ಠಾನಕ್ಕೆ ಗರಿಷ್ಠ ಪ್ರಯತ್ನ ಮಾಡಬೇಕು” ಎಂದು ಹೇಳಿದರು. 

“ಹದಿನೈದು ದಿನಗಳ ಒಳಗಾಗಿ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಆದೇಶಿಸಿದ್ದೇನೆ. 56 ಸಾವಿರ ಹುದ್ದೆಗಳ ಭರ್ತಿಗೆ ಸಮಯ ನಿಗದಿ ಮಾಡಲಾಗುವುದು. ಜೊತೆಗೆ ದಿನಾಂಕವನ್ನು ತಿಳಿಸಲಾಗುವುದು. ಖಾಸಗಿ ಉದ್ಯೋಗ ವಿನಿಮಯ ಕೇಂದ್ರವನ್ನೂ ಸ್ಥಾಪಿಸಲಾಗುವುದು. ಎಲ್ಲಾ ಖಾಸಗಿ, ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಅನುಕೂಲವಾಗುವಂತೆ, ಯುವಕರಿಗೆ ಕೆಲಸ ಸಿಗುವಂತೆ ಸೌಲಭ್ಯ ಕಲ್ಪಿಸಲಾಗುವುದು” ಎಂದರು‌.

More articles

Latest article

Most read