ಬೆಂಗಳೂರು : ರಾಜ್ಯ ಸರ್ಕಾರ ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಕಾರ್ಯ ಭಾರದಲ್ಲಿದ್ದ ಪಿ.ರಾಜೇಂದ್ರ ಚೋಳನ್ ಅವರನ್ನು ಬಿಡುಗಡೆಮಾಡಿ ಅವರ ಜಾಗಕ್ಕೆ ಸರ್ಕಾರದ ಹಣಕಾಸು ಇಲಾಖೆ ಕಾರ್ಯದರ್ಶಿ ( ವೆಚ್ಚ) ಎಸ್.ಎಸ್.ನಕುಲ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ವಿದ್ಯುತ್ ವಿತರಣಾ ನಿಗಮ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ರಾಮಪ್ರಸಾತ್ ಮನೋಹರ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಯಾಗಿ ಹೆಚ್ಚುವರಿ ಕಾರ್ಯಭಾರ ವಹಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಯಾಗಿದ್ದ ಡಾ.ಕೆ.ವಿ. ತ್ರಿಲೋಕಚಂದ್ರ ಅವರಿಗೆ ಯಾವುದೇ ಹುದ್ದೆ ತೋರಿಸದೆ ವರ್ಗಾವಣೆ ಮಾಡಲಾಗಿದೆ. ಹಣಕಾಸು ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯಾಗಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಎಂಡಿ ಅಭಿರಾಮ ಶಂಕರ್ ಅವರಿಗೆ ಹಣಕಾಸು ಇಲಾಖೆ ( ವೆಚ್ಚ) ಹೆಚ್ಚುವರಿ ಕಾರ್ಯಭಾರ ನೀಡಲಾಗಿದೆ. ಇದರೊಂದಿಗೆ ಅವರಿಗೆ ಹಣಕಾಸು ಇಲಾಖೆ( ವೆಚ್ಚ) ಕಾರ್ಯ ದರ್ಶಿ ಹುದ್ದೆಯನ್ನೂ ನೀಡಲಾಗಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಪಾಟೀಲ ಯಲಗೌಡ ಶಿವನಗೌಡ ಅವರಿಗೆ ಎರಡು ಹೆಚ್ಚುವರಿ ಹುದ್ದೆ ನೀಡಲಾಗಿದೆ. ಕರ್ನಾಟಕ ಕೌಶಲ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ.ಆರ್.ಶಿವಪ್ರಸಾದ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರನ್ನು ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯ ಹೆಚ್ಚುವರಿ ಕಾರ್ಯ ಭಾರದಲ್ಲಿದ್ದ ಡಾ. ಅರುಂಧತಿ ಚಂದ್ರಶೇಖರ್ ಅವರನ್ನು ಬಿಡುಗಡೆಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿಯಾಗಿದ್ದ ಆರ್.ಯತೀ ಶ್ ಅವರನ್ನು ಮುಖ್ಯಮಂತ್ರಿಗಳ ಉಪ ಕಾರ್ಯ ದರ್ಶಿ –1 ಹುದ್ದೆಗೆ ವರ್ಗ ಮಾಡಲಾಗಿದೆ. ಯತೀಶ್ ಅವರು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿ ಮುಂದುವರಿಯಲಿದ್ದಾರೆ.

