ಸಾಲಕ್ಕೆ ಹೆದರಿ ಒಂದೇ ಕುಟುಂಬದ ಏಳು ಮಂದಿ ಅತ್ಮಹತ್ಯೆ

ಡೆಹ್ರಾಡೂನ್: ಸಾಲದ ಭಾದೆಯಿಂದ ಹೊರಬರಲಾರದೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಮನೆಯ ಮುಂಬಾಗ ನಿಲ್ಲಿಸಿದ್ದ ಕಾರಿನೊಳಗೆ ಏಳು ಮಂದಿಯ ಶವಗಳು ಪತ್ತೆಯಾಗಿವೆ.

ಡೆಹ್ರಾಡೂನ್‌ ಮೂಲದ ಪ್ರವೀಣ್ ಮಿತ್ತಲ್ ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿತ್ತು. ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಇವರೆಲ್ಲರೂ ಪಂಚಕುಲದ ಬಾಗೇಶ್ವರ ಧಾಮದಲ್ಲಿ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಡೆಹ್ರಾಡೂನ್ ಗೆ ಹಿಂತಿರುಗಿದ ನಂತರ ಕಾರಿನೊಳಗೆ ಸೇರಿಕೊಂಡು ಲಾಕ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾರಿನೊಳಗೆ ಕುಟುಂಬ ಸದಸ್ಯರು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕಾರಿನ ಗಾಜು ಒಡೆದು ಬಾಗಿಲು ತೆರೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೂ ಅವರು ಬದುಕುಳಿಯದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article

Most read