6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಸಿಕ್ಕಿಬಿದ್ದ ಆರೋಪಿ

ಕೊರಟಗೆರೆ : ತಾಲೂಕಿನಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ 6 ವರ್ಷದ ಪುಟ್ಟ ಬಾಲಕಿಯ ಮೇಲೆ ದುಷ್ಕರ್ಮಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

ದೌರ್ಜನ್ಯ ಎಸಗಿದ ವ್ಯಕ್ತಿ ಐ.ಡಿ.ಹಳ್ಳಿ ಮೂಲದ ಪವನ್(23)  ಎಂದು ತಿಳಿದು ಬಂದಿದೆ. ಈತ ಪಟ್ಟಣದ ವಾರ್ಡ್ ಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಎನ್ನಲಾಗಿದೆ.

ಬಾಲಕಿಯನ್ನು ಎಳೆದೊಯ್ದು ಲೈಂಗಿಕ ದೌರ್ಜನ್ಯ ನಡೆಸುವ ವೇಳೆ, ಬಾಲಕಿಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ದೌಡಾಯಿಸಿದ್ದಾರೆ. ಈ ವೇಳೆ ಆರೋಪಿ ಬಾಲಕಿಯನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಪವನ್ ಕೊರಟಗೆರೆ ಪಟ್ಟಣದ ಖಾಸಗಿ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ನೊಂದ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಿಪಿಐ ಅನಿಲ್ ಮತ್ತು ಪಿಎಸ್ ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ ಪವನ್ ಗೆ ಕಠಿಣ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಖಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

More articles

Latest article

Most read