ಹೊಸದಿಲ್ಲಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಯರ ಘನತೆಗೆ ಕುಂದುಂಟು ಮಾಡಿದ ಆರೋಪದ ಮೇರೆಗೆ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ದಾಖಲಾಗಿದೆ.
ದಿಲ್ಲಿಯ ರೋಸ್ ಅವಿನ್ಯೂ ಕೋರ್ಟ್ ಸಂಕೀರ್ಣದಲ್ಲಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾ. ಪ್ರಿಯಾಂಕ ರಜಪೂತ್ ಆದೇಶವೊಂದನ್ನು ಹೊರಡಿಸಿದ್ದು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಮೇಲೆ ಚಾರ್ಜ್ ಶೀಟ್ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ತಕ್ಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದ್ದಾರೆ.
ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಕುಂದುಂಟು ಮಾಡುವುದು), ಸೆಕ್ಷನ್ 354 (ಎ) (ಲೈಂಗಿಕ ಕಿರುಕುಳ ಪ್ರಕರಣಗಳ ಅಡಿಯಲ್ಲಿ ಚಾರ್ಜ್ ಶೀಟ್ ದಾಖಲಿಸಲಾಗಿದೆ.
ಆರುಮಂದಿ ಮಹಿಳಾ ಕುಸ್ತಿಪಟುಗಳು ದೂರು ದಾಖಲಿಸಿದ್ದರು. ಆರನೇ ದೂರೊಂದನ್ನು ಹೊರತುಪಡಿಸಿ ಮಿಕ್ಕ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ದಾಖಲಾಗಿದೆ.
ಇಬ್ಬರು ಮಹಿಳೆಯರ ದೂರಿಗೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ಮೇಲೆ ಐಪಿಸಿ ಸೆಕ್ಷನ್ ಅನ್ವಯ 506(1) ( ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶಿಕ್ಷಿಸಲು ಅಗತ್ಯ ಸಾಕ್ಷ್ಯಾಧಾರಗಳು ಇವೆ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ವಿನೋದ್ ತೋಮರ್ ಎಂಬಾತ ಮೇಲೂ ಕ್ರಿಮಿನಲ್ ಬೆದರಿಕೆಯ ಚಾರ್ಜ್ ಶೀಟ್ ದಾಖಲಿಸಿಕೊಳ್ಳಲಾಗಿದೆ.