Saturday, December 7, 2024

ಸಲ್ಮಾನ್ ಖಾನ್ ನಂತರ ಶಾರುಕ್ ಖಾನ್‌ಗೂ ಜೀವ ಬೆದರಿಕೆ

Most read

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಇದೀಗ ನಟ ಶಾರುಕ್ ಖಾನ್ ಅವರಿಗೂ ಅಪರಿಚಿತ ವ್ಯಕ್ತಿಯೊಬ್ಬನಿಂದ ಬೆದರಿಕೆ ಕರೆ ಬಂದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಕರೆ ಮಾಡಿದ ವ್ಯಕ್ತಿ ರೂ. 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದು, ಕೊಡದೇ ಹೋದಲ್ಲಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಬಾಂದ್ರಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಪ್ರಕರಣ ಸಂಬಂಧ ಅವರಿಚಿತ ವ್ಯಕ್ತಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 308(4), 351(3)(4 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಬ್ಬ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯಿ ಹಲವು ಬಾರಿ ಘೋಷಿಸಿದ್ದಾರೆ.

ಇದೇ ಏಪ್ರಿಲ್‌ನಲ್ಲಿ ಸಲ್ಮಾನ್ ಮನೆಯ ಹೊರಗಡೆ ಗುಂಡಿನ ದಾಳಿಯೂ ನಡೆದಿತ್ತು. ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಆಪ್ತ, ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಅವರ ಹತ್ಯೆ ನಡೆದಿದ್ದು, ಬಿಷ್ಣೋಯಿ ಗ್ಯಾಂಗ್ ಅನ್ನು ಗಂಭೀರವಾಗಿ ಪರಿಗಣಿಸುವಂತೆ ಮಾಡಿದೆ. ಆದರೂ ಸಲ್ಮಾನ್ ಖಾನನ್ ಗೆ ಬೆದರಿಕೆ ಕರೆಗಳು ಬರುವುದು ನಿಂತಿಲ್ಲ. ಬಿಷ್ಣೋಯಿ ಗ್ಯಾಂಗ್ ಹೆಸರನ್ನು ಹೇಳಿಕೊಂಡು ಹಲವಾರು ಮಂದಿ ಹಣಕ್ಕೆ ಬೇಡಿಕೆ ಇಟ್ಟು ಕೊಡದೇ ಹೋದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಲೇ ಇದ್ದಾರೆ.

More articles

Latest article