ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೇವನಹಳ್ಳಿ ಟೋಲ್ ಪ್ಲಾಜಾವನ್ನು ವಿಮಾನ ನಿಲ್ದಾಣ ನಂತರದ ಬಳ್ಳಾರಿ ರಸ್ತೆಗೆ ಸ್ಥಳಾಂತರಿಸಬೇಕು ಎಂದು ಇನ್ ಪೋಸಿಸ್ ಸಂಸ್ಥಾಪಕರಲ್ಲಿ ಒಬ್ಬರಾದ ಮೋಹನ್ ದಾಸ್ ಪೈ, ಆಗ್ರಹಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ನಿತಿನ್ ಗಡ್ಕರಿ ಅವರನ್ನು ಟ್ಯಾಗ್ ಮಾಡಿ ಸಂದೇಶ ಪ್ರಕಟಿಸಿರುವ ಮೋಹನ್ ದಾಸ್ ಪೈ, ಬೆಂಗಳೂರಿಗೆ ಮಾತ್ರ ಏಕೆ ಈ ತಾರತಮ್ಯ ಎಂದು ಪ್ರಶ್ನಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ನಿತಿನ್ ಗಡ್ಕರಿ ಅವರನ್ನು ಟ್ಯಾಗ್ ಮಾಡಿ ಸಂದೇಶ ಪ್ರಕಟಿಸಿರುವ ಮೋಹನ್ ದಾಸ್ ಪೈ, ಭಾರತದಲ್ಲಿ ಈ ಮೊದಲು ಯಾವ ಏರ್ಪೋರ್ಟ್ ರಸ್ತೆಗೂ ಟೋಲ್ ಇರಲಿಲ್ಲ. ಬೆಂಗಳೂರಿಗೆ ಮಾತ್ರ ಏಕೆ ಈ ತಾರತಮ್ಯ ಎಂದು ಪ್ರಶ್ನಿಸಿದ್ದಾರೆ. ನಿತಿನ್ ಗಡ್ಕರಿ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನೂ ಟ್ಯಾಗ್ ಮಾಡಿದ್ದಾರೆ.
2023-24 ಹಣಕಾಸು ವರ್ಷದಲ್ಲಿ ದೇವನಹಳ್ಳಿ ಟೋಲ್ ಪ್ಲಾಜಾ 308 ಕೋಟಿ ರೂ. ಆದಾಯ ಗಳಿಸಿತ್ತು. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಬೆಂಗಳೂರು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮುಖ್ಯ ಹೆದ್ದಾರಿಯಲ್ಲೇ ಟೋಲ್ ಪ್ಲಾಜಾ ಇರುವುದು ಆದಾಯ ಸಂಗ್ರಹ ಏರಿಕೆಗೆ ಕಾರಣವಾಗಿದೆ. ಬಳ್ಳಾರಿ ರಸ್ತೆ ಮಾತ್ರವಲ್ಲದೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರೂ ಇಲ್ಲಿ ಟೋಲ್ ಪಾವತಿಸಬೇಕಾಗುತ್ತದೆ. ಇದರಿಂದ ಆದಾಯ ಸಂಗ್ರಹದಲ್ಲಿ ಹೆಚ್ಚಳವಾಗಿದೆ.
2023-24 ರಲ್ಲಿ, ಕೆಂಪೇಗೌಡ ಅಂತರರರಾಷ್ಟ್ರೀಯ ವಿಮಾನ ನಿಲ್ದಾಣ 37.53 ದಶಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ. 4,39,000 ಮೆಟ್ರಿಕ್ ಟನ್ಗಳಷ್ಟು ಸರಕುಗಳ ಸಾಗಾಟ ಮಾಡಿದೆ. ಇದು ಟೋಲ್ ಪ್ಲಾಜಾದ ಗಳಿಕೆಗೆ ಗಣನೀಯ ಕೊಡುಗೆ ನೀಡಿದೆ. ಕಳೆದ ಒಂದು ದಶಕದಲ್ಲಿ ದೇವನಹಳ್ಳಿ ಟೋಲ್ ಪ್ಲಾಜಾದಲ್ಲಿ 1,577 ಕೋಟಿ ರೂ. ಆದಾಯ ಸಂಗ್ರಹವಾಗಿದೆ.