ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಕಣದಲ್ಲಿ ಇದ್ದರೆ, ಅವರ ಎದುರು ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದೆ.
ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ. ಕಳೆದ ಬಾರಿ ಬಸವರಾಜ್ ಬೊಮ್ಮಾಯಿ ಎದುರು ಯಾಸೀರ್ ಅವರು ಸ್ಪರ್ಧಿಸಿ 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಮತ್ತೆ ಚುನಾವಣೆಗೆ ನಿಂತಿದ್ದು, ಈ ಮೂಲಕ ಎರಡನೇ ಬಾರಿ ವಿಧಾನಸಭಾ ಚುನಾವಣೆಗೆ ಧುಮುಕುತ್ತಿದ್ದಾರೆ.
ಯಾಸೀರ್ ತಾಯಿ ಕೂಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ಜೊತೆಗೆ ಇವರು ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರು. ಈ ಬಾರಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸಿದ್ದು ಗೆಲ್ಲುವ ಭರವಸೆ ಹೊಂದಿದ್ದಾರೆ.
ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಮುಸಲ್ಮಾನರ ಮತಗಳು ಗಣನೀಯ ಸಂಖ್ಯೆಯಲ್ಲಿದ್ದು ಪ್ರತಿ ಬಾರಿಯಂತೆ ಈ ಬಾರಿಯೂ ಮುಸ್ಲಿಂ ಅಭ್ಯರ್ಥಿಗೆ ಅವಕಾಶ ಕಲ್ಪಿಸಲಾಗಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಲು ಬಯಸಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಹೇರಿದ್ದರು.