ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 2.68 ಲಕ್ಷ ರೂ.ಗಳನ್ನು ಎಫ್ಎಸ್ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸವಣೂರಿನಲ್ಲಿರುವ ಸುಭಾಷ್ ಗಡ್ಡೆಪ್ಪನವರ ಮನೆಯಲ್ಲಿ ಹಣ ಪತ್ತೆಯಾಗಿತ್ತು. ಈ ಹಣವನ್ನು ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಕಾರ್ಯಕರ್ತರು ದೂರು ನೀಡಿದ್ದರು. ಗ್ರಾಮದಲ್ಲಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಪೊಲೀಸರು ಹಾಗೂ ಕೆಆರ್‌ಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿತ್ತು. ಮಾಹಿತಿ ಲಭ್ಯವಾಗುತ್ತಿದ್ದಂತೆ ಸುಭಾಷ್ ಮನೆ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು, ಹಣ ವಶಪಡಿಸಿಕೊಂಡಿದ್ದಾರೆ. ಆರೋಪಿ ಸುಭಾಷ್ ಗಡ್ಡೆಪ್ಪನವರ ಅವರ ವಿರುದ್ಧ ಎನ್‌ಸಿಆರ್ ದಾಖಲಿಸಲಾಗಿದೆ ಎಂದು ಎಸ್.ಪಿ. ಅಂಶುಕುಮಾರ್ ತಿಳಿಸಿದ್ದಾರೆ.