ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಗೆಲುವು ಸಾಧಿಸಲಿದ್ದಾರೆ ಎಂದು ಸುಲಭವಾಗಿ ಊಹಿಸಬಹುದು ಮತ್ತು ಸಮೀಕ್ಷೆಯೂ ಅದನ್ನೇ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹಮದ್ ಪಠಾಣ್ ಸ್ಪರ್ಧಿಸಿದ್ದಾರೆ.
ಭರತ್ ತಂದೆ ಸಂಸದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಮರು ಚುನಾವಣೆ ನಡೆದಿತ್ತು. ಇಲ್ಲಿ 1,21,443 ಪುರುಷ, 1,26,076 ಮಹಿಳಾ ಸೇರಿ 2,37,525 ಮತದಾರರಿದ್ದಾರೆ.
2023ರಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ 1,00,016 ಮತ ಗಳಿಸಿ ಭರ್ಜರಿ ಜಯ ಸಾಧಿಸಿದ್ದರು. ಮತ್ತು ಪಠಾಣ್ 64,038 ಮತ ಗಳಿಸಿದ್ದರು. ಪುತ್ರನಿಗಾಗಿ ಬಸವರಾಜ್ ಬೊಮ್ಮಾಯಿ ಅವರು ಕ್ಷೇತ್ರವನ್ನು ಚೆನ್ನಾಗಿಯೇ ಹದಗೊಳಿಸಿದ್ದಾರೆ ಎಂದು ಅಲ್ಲಿನ ಮುಖಂಡರು ಹೇಳುತ್ತಾರೆ.