ಸಿಎಂ, ಡಿಸಿಎಂಗೆ ಅಬಿನಂದನೆ ಸಲ್ಲಿಸಿದ ಶಿಗ್ಗಾಂವಿ ನೂತನ ಶಾಸಕ ಪಠಾಣ್‌

ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರ್  ಪಠಾಣ್ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು.

ವಸತಿ ಸಚಿವ ಜಮೀರ್ ಅಹಮದ್ ಖಾನ್, ವಿಧಾನ‌ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಶಿವಣ್ಣ ಮತ್ತು ನರೇಂದ್ರಸ್ವಾಮಿ, ಶ್ರೀನಿವಾಸ್ ಮಾನೆ,  ಹೆಸ್ಕಾಂ ಅಧ್ಯಕ್ಷರಾದ ಖಾದ್ರಿ ಉಪಸ್ಥಿತರಿದ್ದರು.

More articles

Latest article

Most read