ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಯಾವುದೇ ಮುನ್ಸೂಚನೆ ನೀಡದೆ, ನಾಮಫಲಕ ಅಳವಡಿಸದೆ ನಡೆಸುತ್ತಿರುವ ಕಾಮಗಾರಿಯಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ವರದಿಯಾಗಿದೆ.
ರಾತ್ರಿ ವೇಳೆ ಸಕಲೇಶಪುರ ತಾಲ್ಲೂಕಿನ, ಆನೆಮಹಲ್ ಬಳಿ ನಡೆಯುತ್ತಿರುವ ನೂತನ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ರಿದ್ದು ಇಂದು ಮುಂಜಾನೆವರೆಗೂ ಟ್ರಾಫಿಕ್ ಜಾಮ್ ಆಗಿದೆ. ಗುತ್ತಿಗೆದಾರನ ವಿರುದ್ಧ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರೀಕ್ಷೆಗೆ ತೆರಳಲು ಶಾಲಾ, ಕಾಲೇಜು ವಿದ್ಯಾರ್ಥಿಗಳ ಪರದಾಟವಾಗಿದ್ದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಗುತ್ತಿಗೆದಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ದೂರು ನೀಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.