ಬೆಂಗಳೂರು: ಪತ್ನಿ ಗೀತಾ ಶಿವರಾಜ ಕುಮಾರ್ ಪರವಾಗಿ ಎಡೆಬಿಡದೆ ಪ್ರಚಾರದಲ್ಲಿ ತೊಡಗಿಕೊಂಡಿರುವ ಚಿತ್ರನಟ ಡಾ.ಶಿವರಾಜ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿಯಾದ ಒತ್ತಡದಿಂದ ಬಳಲಿರುವ ಹಿನ್ನೆಲೆಯಲ್ಲಿ ಅವರು ಅನಾರೋಗ್ಯಕ್ಕೆ ಈಡಾಗಿರಬಹುದು ಎಂದು ತಿಳಿದುಬಂದಿದ್ದು, ಇಂದು ಸಂಜೆ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ