ಪತ್ನಿ ಪರ ಪ್ರಚಾರ : ಶಿವರಾಜ್ ಕುಮಾರ್ ಅವರ ಚಿತ್ರ, ಜಾಹಿರಾತು ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಡಾ.ರಾಜ್ ಕುಮಾರ್ ಅವರ ಹಿರಿಯ ಪುತ್ರ ಡಾ.ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿಯ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಅವರು ಅಭಿನಯಿಸಿರುವ ಚಿತ್ರಗಳು ಮತ್ತು ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ.

ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗದಲ್ಲಿ ಸ್ಪರ್ಧಿಸುತ್ತಿದ್ದು, ಅವರ ಪರ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಅವರ ಸಿನಿಮಾ, ಜಾಹೀರಾತುಗಳನ್ನು ನಿರ್ಬಂಧ ಮಾಡಬೇಕು ಎಂದು ಬಿಜೆಪಿ ಮನವಿ ಮಾಡಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಿದ್ದಾರೆ. ಮೊನ್ನೆಯಷ್ಟೇ ಅವರ ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದು ಈಗ ಅವರ ವಿರುದ್ಧ ದೂರು ದಾಖಲಾಗಿದೆ.

More articles

Latest article

Most read