ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಎಸ್ ಆರ್ ಟಿಸಿ ಬಸ್ ಗೆ ಶಿವಸೇನಾ ಕಾರ್ಯಕರ್ತರು ಜೈ ಮಹಾರಾಷ್ಟ್ರ ಎಂಬ ಸ್ಟಿಕ್ಕರ್ ಅಂಟಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಇಂದು ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್.ಗುಡೆನ್ನವರ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಸಜ್ಜಾಗಿತ್ತು. ಆದರೆ ಜಿಲ್ಲಾಡಳಿತ ಅನುಮತಿ ಕೊಡದ ಕಾರಣ, ಕೊಲ್ಹಾಪುರದಲ್ಲಿ ಶಿವಸೇನೆಯ ಉದ್ದವ್ ಠಾಕ್ರೆ ಬಣದ ಕಾರ್ಯಕರ್ತರು ಕರ್ನಾಟಕ ಬಸ್ ಗಳನ್ನು ತಡೆದು ಸ್ಟಿಕ್ ಅಂಟಿಸಿ ಪುಂಡಾಟ ಮೆರೆದಿದ್ದಾರೆ. ಆದ್ದರಿಂದ ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಬಸ್ ಗಳು ನಿಪ್ಪಾಣಿಯವರೆಗೆ ಮಾತ್ರ ಸಂಚರಿಸಿ ಬೆಳಗಾವಿಗೆ ಮರಳುತ್ತಿವೆ.
ಪ್ರತಿ ಬಾರಿ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾದಾಗಲೆಲ್ಲಾ ಎಂಇಎಸ್ ಈ ರೀತಿ ಪುಂಡಾಟಿಕೆ ಮೆರೆಯುತ್ತಿದೆ.

