ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ
ವಕೀಲ ಸುಭಾಷ್ ಚಂದ್ರನ್ ಕೆ.ಆರ್. ವಿಚಾರಣೆ ನಡೆಸುವಂತೆ ಕೋರಿ ಅಟಾರ್ನಿ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ.
ಸುಭಾಷ್ ಚಂದ್ರನ್ ಅವರು ಅವರು ನ್ಯಾಯಾಂಗ ನಿಂದನೆ ಕಾಯ್ದೆ, 1971ರ 15ನೇ ಸೆಕ್ಷನ್ ಅಡಿಯಲ್ಲಿ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ದೇಶದ ಸಂವಿಧಾನವನ್ನು ಸೋಲಿಸುವ, ಸುಪ್ರೀಂ ಕೋರ್ಟ್ ನ ಅಧಿಕಾರ ಮತ್ತು ಘನತೆಯನ್ನು ಕುಗ್ಗಿಸುವ ಹೇಯ ಕೃತ್ಯ ಇದಾಗಿದೆ. ನ್ಯಾಯಾಂಗ ನಿಂದನೆಯಾಗಿರುವ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ಗೆ ಖುದ್ದಾಗಿ ತಿಳಿದಿದ್ದರೆ, ಇಂತಹ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಈ ನ್ಯಾಯಾಲಯಗಳು ಆರಂಭಿಸಬಹುದಾಗಿದೆ ಎಂದು ಕಾಯ್ದೆಯಲ್ಲಿ ಹೇಳಲಾಗಿದೆ ಎಂದು ಸುಭಾಷ್ ಚಂದ್ರನ್ ಅವರು ಅಟಾರ್ನಿ ಜನರಲ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ವ್ಯಕ್ತಿಯೊಬ್ಬರ ಮೇಲೆ ಯಾರು ಬೇಕಾದರೂ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲು ಅವಕಾಶ ಇದೆ. ಆದರೆ, ಈ ಪ್ರಕ್ರಿಯೆಗೆ ಹೈಕೋರ್ಟ್‌ನಲ್ಲಿ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ಅಟಾರ್ನಿ ಜನರಲ್ ಅಥವಾ ಸಾಲಿಸಿಟರಲ್ ಜನರಲ್ ಒಪ್ಪಿಗೆ ನೀಡಬೇಕಾಗುತ್ತದೆ ಎಂದು ಕಾಯಿದೆ ಹೇಳುತ್ತದೆ.