ಮುಂಬೈ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಪ್ರಕರಣ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇದು ನ್ಯಾಯಾಂಗದ ಮೇಲಿನ ದಾಳಿ ಮಾತ್ರವಲ್ಲ. ಸಂವಿಧಾನಕ್ಕೂ ಮಾಡಿದ ಅಪಚಾರ ಎಂದು ಹೇಳಿದ್ದಾರೆ.
ದೇಶದ ನ್ಯಾಯಾಂಗ ವ್ಯವಸ್ಥೆಯು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನು ಮಾಡುತ್ತಿದೆ. ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡುವ ಪ್ರಯತ್ನವು ನ್ಯಾಯಾಂಗದ ಮೇಲಿನ ದಾಳಿ ಮಾತ್ರವಲ್ಲ, ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ.
ದೇಶಾದ್ಯಂತ ಹರಡುತ್ತಿರುವ ಈ ವಿಷವು ಈಗ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಗಳನ್ನು ಗೌರವಿಸಲು ನಿರಾಕರಿಸುತ್ತಿದೆ. ಇದು ದೇಶಕ್ಕೆ ಎಚ್ಚರಿಕೆಯ ಗಂಟೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.