ಕುಡಿದ ಅಮಲಿನಲ್ಲಿ ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

Most read

ಮಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ, ನಂತರ ತಾನೂ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ದಂಪತಿಯನ್ನು ರಾಮಚಂದ್ರಗೌಡ ಮತ್ತು ವಿನೋದಾ ಕುಮಾರಿ ಎಂದು ಗುರುತಿಸಲಾಗಿದೆ. ರಾಮಚಂದ್ರ ಪ್ರತಿದಿನ ಮದ್ಯ ಸೇವಿಸಿ ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ.  ಅದೇ ರೀತಿ ಶುಕ್ರವಾರ ರಾತ್ರಿಯೂ ಕಡಿದು ಮನೆಗೆ ಬಂದಿದ್ದಾನೆ. ಎಂದಿನಂತೆ ಗಂಡ ಹೆಂಡತಿ ಜಗಳವಾಡಿದ್ದಾರೆ. ಜಗಳ ಬಿಡಿಸಲು ಬಂದಿದ್ದಾನೆ. ಇರಿಂದ ಸಿಟ್ಟಿಗೆದ್ದ ರಾಮಚಂದ್ರ ಮಗನಿಗೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಮಗನಿಗೆ ಶೂಟ್​​ ಮಾಡುವಾಗ ತಾಯಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಕುಮಾರಿ ಮೃತಪಟ್ಟಿದ್ದಾರೆ. ಪತ್ನಿಯ ಸಾವಿನಿಂದ ಮನನೊಂದ ರಾಮಚಂದ್ರ ಆಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ  ಅಡಿಯಲ್ಲಿ ಪ್ರಕರಣ ದಾಖಲಾಗಿದೆ

More articles

Latest article