ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಕಾಮೆಡಿಯನ್‌ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್‌ ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ತಿಳಿದುಬಂದಿದೆ.

ಏಳನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಮೇ 14 ಕೊನೆಯ ದಿನವಾಗಿದ್ದು, ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರು ಒಂದು ದಿನ ಮುಂಚಿತವಾಗಿ ಮಂಗಳವಾರವೇ ನಾಮಪತ್ರ ಸಲ್ಲಿಸಿದ್ದರು. ಆದರೆ ಅಫಿಡವಿಟ್ ಸಲ್ಲಿಸದ ಕಾರಣ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತವಾಗಿದೆ ಎಂದು ಹೇಳಲಾಗುತ್ತಿದೆ.

ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಅಧಿಕಾರಿಗಳು ನಾಮಪತ್ರವನ್ನು ಪರಿಶೀಲಿಸಿ ತಿರಸ್ಕಾರ ಮಾಡಿದ್ದಾರೆ. ಆಗ ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರು ‘ನಾಮಿನೇಷನ್ ಕ್ಯಾನ್ಸಲ್ ಮಾಡ್ತೀನಿ, ಮೊದಲು ಆ ಫೈಲ್ ತಗೊಳ್ಳಿ’ ಎಂದು ಹೇಳೀದ್ದಾರೆ.

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ಒಟ್ಟು 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

More articles

Latest article

Most read