ತುಮಕೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡನ ಜತೆಗೆ ಸೆಲ್ಪಿ ತೆಗೆದುಕೊಂಡ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ರಾಜ್ಯೋತ್ಸವ ಆಚರಣೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಂಇಎಸ್ ಮುಖಂಡರ ಜತೆ ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಎಸ್ ಐ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ನಾಡು ನುಡಿಯ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಯಾವುದೇ ಅಧಿಕಾರಿ, ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಲೂವುದು ನಿಶ್ಚಿತ. ಕನ್ನಡ ನಾಡು, ನೆಲ, ಜಲ, ಭಾಷೆ ರಕ್ಷಣೆ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

