ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಬೆನ್ನಲ್ಲೇ ಇಂದು ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ನಡೆಸಲಿದ್ದಾರೆ.