ಸಿದ್ಧರಾಮಯ್ಯ ಕಾಳಜಿಯಿಂದ ಶೋಷಿತ ವರ್ಗದ ಮಕ್ಕಳ ಶಿಕ್ಷಣಕ್ಕೆ ಬಲ: ಎಚ್.ಸಿ.ಮಹದೇವಪ್ಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಕಾರಣಕ್ಕೆ ರಾಜ್ಯದಲ್ಲಿ ಮೊರಾರ್ಜಿ ದೇಸಾಯಿ ಶಾಲೆಗಳು, ಆಶ್ರಮ ಶಾಲೆಗಳು, ವಸತಿ ಶಾಲೆಗಳು ಹೆಚ್ಚೆಚ್ಚು ಆರಂಭಗೊಂಡು ದಲಿತ, ಹಿಂದುಳಿದ, ಆದಿವಾಸಿ ಮತ್ತು ಬುಡಕಟ್ಟು ಮಕ್ಕಳ ಶೈಕ್ಷಣಿಕ, ಸಾಂಸ್ಕೃತಿಕ ಪ್ರಗತಿಗೆ ನೆರವಾಗುತ್ತಿವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಎಲ್ಲ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ನಾಡಿನ ಮೂಲೆಮೂಲೆಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಕರು ಮತ್ತು ಪೋಷಕರೊಂದಿಗೆ ಹಾಜರಾಗಿ ಸಂಭ್ರಮಿಸಿದರು

ಹೆಚ್.ಸಿ.ಮಹದೇವಪ್ಪ ಅವರನ್ನು ಸಮಾಜ ಕಲ್ಯಾಣ ಸಚಿವರನ್ನಾಗಿ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿಗೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು‌

ಕ್ರೈಸ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article

Most read