ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ, ಸೆಪ್ಟೆಂಬರ್ 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.
ಮುಡಾ ಹಗರಣ ಸಂಬಂಧ ಇಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಸೆಪ್ಟೆಂಬರ್ 12ರಂದು ಅಭಿಷೇಕ್ ಮನು ಸಿಂಘ್ವಿ ಕೂಡ ವಾದ ಮಂಡಿಸಲಿದ್ದಾರೆ.
ಇದರ ನಡುವೆ ಬಹಿರಂಗವಾಗಿಯೇ ಕೆಲವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆ ಮಾಡುತ್ತಿರುವುದು ರಾಜಕೀಯವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಅವರ ನಡುವೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಹಿರಂಗ ವಾಗ್ವಾದಗಳು ನಡೆದಿವೆ.