ಇಂದು ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿದ್ದರಾಮಯ್ಯ: ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿ ಪ್ರವಾಸ ಕೈಗೊಂಡಿದ್ದು, ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿದ್ದಾರೆ.

ಮುಡಾ ಪ್ರಕರಣ ಸಂಬಂಧಿಸಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅವರು ಹೈಕಮಾಂಡ್‌ ನಾಯಕರಿಗೆ ಮಾಹಿತಿಯನ್ನು ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ಮಾಡಲಿದ್ದಾರೆ.

ರಾಜ್ಯಪಾಲರ ಈ ನಡೆಯನ್ನು ಖಂಡಿಸಿ ನಿನ್ನೆ ಸಚಿವ ಸಂಪುಟದಲ್ಲಿ ಅವರ ವಿರುದ್ಧ ಒಪ್ಪಿಗೆ ಪಡೆಯಲಾಗಿದೆ. ಜೊತೆಗೆ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿದ್ದಾರೆ. ಈಗ ಸಿದ್ದರಾಮಯ್ಯ ಅವರಿಗೆ ಆನೆ ಬಲ ಸಿಕ್ಕಿದ್ದು ಈ ಹಲವು ವಿಷಯಗಖ ಕುರಿತು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ‌.

More articles

Latest article

Most read