ಕೋಲಾರ: ಕಾಂಗ್ರೆಸ್ ನಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಅವರು ಚುನಾವಣೆಗೆ ನಿಲ್ಲದಿದ್ದರೂ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕೆಂದರೆ ಅವರು ಇರಲೇಬೇಕು. ಇನ್ನೊಂದು ಅವಧಿಯವರೆಗೆ ಅವರು ರಾಜಕೀಯದಲ್ಲಿ ಇರಬೇಕು ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನಿಸುತ್ತಾರೆ. ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷರ ಬದಲಾವಣೆ ಕುರಿತು ಇನ್ನೂ ಚರ್ಚೆ ಆಗಿಲ್ಲ. ಬೇರೆ ರಾಜ್ಯಗಳ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ಚರ್ಚೆ ಬಂದಾಗ ಅಭಿಪ್ರಾಯ ಹೇಳುತ್ತೇವೆ ಎಂದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಉಸ್ತುವಾರಿಗಳ ಬದಲಾವಣೆ ಬಗ್ಗೆಯೂ ನನಗೆ ಗೊತ್ತಿಲ್ಲ. ನಮ್ಮ ವ್ಯಾಪ್ತಿಯಲ್ಲಿ ಅದು ಇಲ್ಲ. ಇದನ್ನು ರಾಹುಲ್ ಗಾಂಧಿ ನಿರ್ಧರಿಸುತ್ತಾರೆ. ಬೇರೆ ರಾಜ್ಯಗಳ ಉಸ್ತುವಾರಿ ಬದಲಾವಣೆ ಆಗುತ್ತಿದೆ. ರಾಜ್ಯದಲ್ಲಿ ಸಧ್ಯ ರಣದೀಪ್ ಸಿಂಗ್ ಸುರ್ಜೇವಾಲಾ ಉಸ್ತುವಾರಿಯಾಗಿ ಇದ್ದಾರೆ ಎಂದರು