ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೆ ಪತ್ರಿಕಾಗೋಷ್ಠಿ ಕರೆದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತವರ ಸಚಿವ ಸಂಪುಟ ದಿಢೀರ್‌ ಪತ್ರಿಕಾಗೋಷ್ಠಿ ಕರೆದಿದ್ದಾರೆ.​ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಇಂದು ಮಧ್ಯಾಹ್ನ 03.00 ಗಂಟೆಗೆ ಗೃಹ ಕಚೇರಿ ಕೃಷ್ಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.