ಸುದೀರ್ಘ ನೀತಿಸಂಹಿತೆಯಿಂದ ಆಡಳಿತ ಯಂತ್ರಕ್ಕೆ ಲಕ್ವಾ ಹೊಡೆದಂತಾಗಿತ್ತು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ‌ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಜೂನ್‌ 6 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ‌ ಎಂದು ಅವರು ಆತಂಕ ವ್ಯಕ್ತಪಡಿಸಿದರು.

500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಲು ಸೂಚಿಸಿದರು.

ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ. ನರಸೀಪುರ ತಾಲ್ಲೂಕು ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ. ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸಲು ವಿಫಲವಾಗಿದ್ದಾರೆ. ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ. ಈ ಘಟನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿದೆ.

ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಬಹುದು ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

More articles

Latest article

Most read