Sunday, July 14, 2024

ರಾಷ್ಟ್ರಪತಿಗಳ ಬಗ್ಗೆ ಗೌರವವಿದೆ, ಏಕವಚನದಲ್ಲಿ ಸಂಭೋದಿಸಿದ್ದಕ್ಕೆ ವಿಷಾದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Most read

ಚಿತ್ರದುರ್ಗದಲ್ಲಿ (Chitradurga) ನಡೆದ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ಸಿಎಂ, ಮಾತಿನ ಭರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ ಈ ಕುರಿತಂತೆ ಟ್ವೀಟ್ ಮಾಡಿ, ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೇ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ ಅಂತ ಸಿಎಂ ಹೇಳಿದ್ದಾರೆ.

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ – ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿದ ಸಿದ್ದರಾಮಯ್ಯ, ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಏಕವಚನ ಪ್ರಯೋಗಿಸಿದ್ರು. “ಬಿಜೆಪಿ ಯೋಗ್ಯತೆಗೆ ಪಾಪ ದ್ರೌಪದಿ ಮುರ್ಮು… ಶೋಷಿತ ಸಮುದಾಯಕ್ಕೆ ಸೇರಿದವರು. ಪಾರ್ಲಿಮೆಂಟ್ ಉದ್ಘಾಟನೆ ಮಾಡೋಕೆ ಕರೆದಿಲ್ಲ. ಮೊನ್ನೆ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ಉದ್ಘಾಟನೆ ಮಾಡೋಕೆ ಕರೆಯಲಿಲ್ಲ” ಅಂತ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ರು. ಇದನ್ನು ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು.

More articles

Latest article