ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ತಯಾರಿ ನಡೆಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರನ್ನು ಹೇಗೆಲ್ಲ ಕಟ್ಟಿ ಹಾಕಬಹುದೊ ಆ ತಂತ್ರವನ್ನೆಲ್ಲ ಬಳಸುತ್ತಿದ್ದಾರೆ.ಇದರ ನಡುವೆ, ಸಿದ್ದರಾಮಯ್ಯ ಅವರು ಇವತ್ತು ಈ ಸಲ ಕಪ್ ನಮ್ದೆ ಎಂದು ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.
ಸದ್ಯ, ಟಾಟಾ ಮಹಿಳಾ ಪ್ರಿಮಿಯರ್ ಲೀಗ್ ಫೈನಲ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಚಾಂಪಿಯನ್ಸ್ ಪಟ್ಟವನ್ನು ಮುಡಿಗೇರಿಸಿಕೊಂಡಿರುವ ಮಹಿಳಾ ತಂಡಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರಿದ್ದು, ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮುಂದುವರೆದು, ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ……✌ ಎಂದು ಕಡೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಈಗ ಈ ಟ್ವೀಟ್ ಹಿಂದಿನ ಮರ್ಮವೇನು ಎಂಬುದರ ಬಗ್ಗೆ ಮೂರು ಪಕ್ಷದ ಕಾರ್ಯಕರ್ತರು ತಲೆ ಕೆಡಿಸಿಕೊಂಡಿದ್ದಾರೆ. ಹತ್ತಿರದಲ್ಲಿ ಪುರುಷರ IPL ಮತ್ತು ಲೋಕಸಭಾ ಚುನಾವಣೆ ಎರಡೂ ಕೂಡ ಇದೆ. ಸಿಎಂ ಸಿದ್ದರಾಮಯ್ಯ ಅವರು RCB ಗೆಲುವಿನ ಬಗ್ಗೆ ಮಾತಾಡಿದ್ರ ಅಥವಾ ಲೋಕ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಮಾತಾಡಿದ್ರ ಎನ್ನುವ ಬಗ್ಗೆ ಚರ್ಚೆಯಾಗುತ್ತಿದೆ.
ಲೋಕ ಚುನಾವಣೆಯಲ್ಲಿ ದೆಹಲಿ ಗದ್ದುಗೆ ಹಿಡಿಯಲು ಸಾಕಷ್ಟು ಶ್ರಮಿಸುತ್ತಿರುವ ಕಾಂಗ್ರೆಸ್‌ಗೆ ಹಲವು ಅಸ್ತ್ರಗಳಿವೆ ಎಂದರೆ ತಪ್ಪಾಗಲಾರದು. ಸದ್ಯ ಬಿಜೆಪಿಯ ಸುಳ್ಳು ಭರವಸೆಗಳೇ , ಬೆಲೆ ಏರಿಕೆ, ರೈತರ ಸಮಸ್ಯೆ ಇತ್ಯಾದಿಗಳು ಅಸ್ತ್ರವಾದರೆ ಮತ್ತೊಂದುಕಡೆ ಕಾಂಗ್ರೆಸ್ ಗ್ಯಾರಂಟಿಗಳು ಈ ಚುನಾವಣೆಯಲ್ಲಿ ಹೆಚ್ಚಿನ ಸಹಾಯ ಮಾಡಬಹುದು. ಒಟ್ಟಿನಲ್ಲಿ ಸಿದ್ದರಾಮಯ್ಯ ಅವರ ಈ ಟ್ವೀಟ್ ಜನರ ಮನಸ್ಸಿನಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುವುದಂತು ಸತ್ಯ.