ಕಲಬುರಗಿಯಲ್ಲಿ ರಾತ್ರೋ ರಾತ್ರಿ ಪ್ರತಿಷ್ಠಾಪಿಸಿದ್ದ ಸಿದ್ದರಾಮಯ್ಯ ಪ್ರತಿಮೆ ಪಾಲಿಕೆಯಿಂದ ತೆರವು

ಕಲಬುರಗಿ : ರಾತ್ರೋ ರಾತ್ರಿ  ಇಲ್ಲಿನ  ಹೈಕೋರ್ಟ್ ಕ್ರಾಸ್ ಬಳಿ, ಈ ಹಿಂದೆ ‘ಸಿದ್ದರಾಮಯ್ಯ ವೃತ್ತ’ ಎಂದು ಹೆಸರಿಸಲಾದ ಸ್ಥಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಕಲ್ಯಾಣ ಕರ್ನಾಟಕ ಉತ್ಸವ’ಕ್ಕಾಗಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿರುವ ಸಂದರ್ಭದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಮೂರ್ತಿಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದಾರೆ.

ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ ಈ ಪ್ರತಿಮೆ ಸ್ಥಾಪಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆ ಈ ಕಠಿಣ ಕ್ರಮ ಕೈಗೊಂಡಿದೆ.

More articles

Latest article

Most read